Monday, December 4, 2023

Latest Posts

ವಿದ್ಯುತ್ ಕದ್ದು ದಂಡ ಕಟ್ಟಿರೋರೆಲ್ಲ ಯತೀಂದ್ರ ಬಗ್ಗೆ ಮಾತನಾಡ್ತಾರೆ: ಸಿಎಂ ಕಿಡಿ

ಹೊಸದಿಗಂತ ವರದಿ ಕೊಪ್ಪಳ :

ವಿದ್ಯುತ್ ಕಳ್ಳತನ ಎಸಗಿ ದಂಡ ಕಟ್ಟಿರುವ ಕುಮಾರಸ್ವಾಮಿಯವರಿಗೆ ನಮ್ಮನ್ನು ಅಪೇಕ್ಷಿಸಲು ಯಾವ ನೈತಿಕತೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

.ಮಾಜಿ ಶಾಸಕ ಯತೀಂದ್ರರವರು ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ , ಅವರ ಬಳಿ ಏನಾದರೂ ಪುರಾವೆ ಇದೆಯೇ ಎಂದು ಪ್ರಶ್ನಿಸಿದರು. ಯತೀಂದ್ರರವರು ಸಿಎಸ್ ಆರ್ ಫಂಡ್ ಬಗ್ಗೆ ಮಾತನಾಡಿದ್ದರೆ, ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸುತ್ತಾರೆ.

ಕುಮಾರಸ್ವಾಮಿಯವರ ಕಾಲದಲ್ಲಿ ವರ್ಗಾವಣೆಗಳ ಮೂಲಕ ದುಡ್ಡು ಮಾಡಿರುವುದು ಜಗಜ್ಜಾಹೀರಾಗಿದೆ. ಅವರು ನಮ್ಮ ವಿರುದ್ದ ಆರೋಪಗಳನ್ನು ಮಾಡುವ ನೈತಿಕತೆ ಇಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!