ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ವಿರುದ್ಧ ಹೋರಾಡಲು ಪ್ರತಿಯೊಬ್ಬರ ಸಹಕಾರವೂ ಮುಖ್ಯ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಶಾಸಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ,ಸಂಪುಟದ ಸಹೋದ್ಯೋಗಿಗಳು, ಹಾಗೂ ಪಂಚಾಯತ್ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಸೂಚಿಸಿದ್ದಾರೆ.
ನಾವೆಲ್ಲರೂ ಕೊರೋನಾ ವಿರುದ್ಧ ಒಟ್ಟಾಗಿ ಹೋರಾಡಿದರೆ ಮಾತ್ರ ಗೆಲ್ಲಲು ಸಾದ್ಯ. ಕೊರೋನಾ ಹೆಚ್ಚಳವನ್ನು ನಿಯಂತ್ರಿಸಲು ನಾಗರಿಕರು ಸೋಂಕನ್ನು ತಡೆಗಟ್ಟುವಲ್ಲಿ ತಮ್ಮ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಗೆಹ್ಲೋಟ್ ಹೇಳಿದರು.