ಎಲ್ಲರ ಚಿತ್ತ RCB vs CSK ಮ್ಯಾಚ್ ಅತ್ತ: ಪ್ಲೇಆಫ್ ಕನಸು ಯಾರಿಗೆ ನನಸು? ವೇಟ್ & ವಾಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ 52 ನೇ ಪಂದ್ಯವು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಏಳು ಗೆಲುವುಗಳೊಂದಿಗೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆಯುವ ಸಮೀಪದಲ್ಲಿದೆ.

ಈ ಪಂದ್ಯದಲ್ಲಿ ಗೆದ್ದರೆ ಆರ್‌ಸಿಬಿಯ ಒಟ್ಟು ಅಂಕಗಳು 16 ಕ್ಕೆ ಏರುತ್ತವೆ ಮತ್ತು ಪ್ಲೇಆಫ್‌ನಲ್ಲಿ ಅವರ ಸ್ಥಾನ ಬಹುತೇಕ ಖಚಿತವಾಗುತ್ತದೆ. ಈವರೆಗೆ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ತಂಡವು ನಿರಂತರವಾಗಿ ಉತ್ತಮ ಪ್ರದರ್ಶನ ನೀಡಿದೆ. ಇದನ್ನು ಗಮನಿಸಿದರೆ, ಫೈನಲ್ ತಲುಪಲು ಎರಡು ಅವಕಾಶಗಳನ್ನು ಪಡೆಯುವ ಮೂಲಕ ಬೆಂಗಳೂರು ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದೆ.

ಚೆನ್ನೈ ಬ್ಯಾಟ್ಸ್‌ಮನ್‌ಗಳು ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿಲ್ಲ. ಆಯುಷ್ ಮ್ಹಾತ್ರೆ, ಸ್ಯಾಮ್ ಕರನ್, ಡೆವಾಲ್ಡ್ ಬ್ರೆವಿಸ್ ಮತ್ತು ಶಿವಂ ದುಬೆ ಅವರಂತಹ ಬ್ಯಾಟ್ಸ್‌ಮನ್‌ಗಳು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಆಟ ಬಂದಿಲ್ಲ. ಧೋನಿ ಬ್ಯಾಟ್ ಕೂಡ ಸದ್ದು ಮಾಡುತ್ತಿಲ್ಲ. ಎಲಿಮಿನೇಟ್ ಆಗಿರುವ ಕಾರಣ ಮೈಚಳಿ ಬಿಟ್ಟು ಆಡುವ ಸಂದರ್ಭ ಬರಳಿದ್ಯಾ ಎಂಬುದನ್ನು ಕಾದುನೋಡಬೇಕಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!