ಹೊಸದಿಗಂತ ವರದಿ ಹುಬ್ಬಳ್ಳಿ:
ಗೃಹ ಇಲಾಖೆ ಕಾನೂನಿನ ಚೌಕಟ್ಟಿನಲ್ಲಿ ನಡೆಸಬೇಕಾಗುತ್ತದೆ. ಅವರಿವರ ಮಾತು ಕೇಳಿಕೊಂಡು ನಡೆಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಮಂಗಳವಾರ ನಗರದ ವಿಮಾನ ನಿಲ್ದಾಣದಲ್ಲಿ ಸಿ.ಟಿ. ರವಿ ಪ್ರಕರಣಕ್ಕೆ ಸಂಬಂಧಿಸಿ ಬೇರೆಯವರು ಹಸ್ತಕ್ಷೇಪದ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದರ ಅವರು, ಪೊಲೀಸ್ ಇಲಾಖೆಗೆ ತನ್ನದೇ ಯಾದ ಜವಾಬ್ದಾರಿಗಳಿವೆ. ಏನೇ ಕ್ರಮ ಕೈಗೊಳ್ಳಬೇಕಿದ್ದರೂ ಅದಕ್ಕೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಆದೇಶ ನೀಡಬೇಕು. ಈ ಇಲಾಖೆಯಲ್ಲಿ ಯಾರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನನ್ನನ್ನು ಅಸಮರ್ಥರು ಎಂದು ಕರೆದಿದ್ದಾರೆ. ಅವರು ಹೇಳಿದಂತೆ ಇಲಾಖೆ ನಡೆಸಲು ಸಾಧ್ಯವಿಲ್ಲ. ಇದರಲ್ಲಿ ಯಾವ ಅಸಮರ್ಥತತೆ ಕಾಣುವುದಿಲ್ಲ ಎಂದು ಹೇಳಿದರು.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿ ಮೇಲೆ ಕಿರುಕುಳ ನೀಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಕ್ತ ಹಾಗೂ ಹಿರಿಯ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು. ಒಂದು ವೇಳೆ ಅದು ಸತ್ಯವಾಗಿದ್ದರೆ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಹೆಚ್ಚಾಗಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಅದರಲ್ಲಿ ತಪ್ಪುಗಳು ಕಂಡು ಬಂದರೆ ಸರಿಪಡಿಸಲಾಗುವುದು ಎಂದು ಹೇಳಿದರು.