ಹೊಸದಿಗಂತ ಡಿಜಿಟಲ್ ಡೆಸ್ಕ್:
ಇವಿಎಂ ಹಾಗೂ ವಿವಿಪ್ಯಾಟ್ ಸ್ಲಿಪ್‌ಗಳನ್ನು ಹೊಂದಾಣಿಕೆ ಮಾಡುವ ಕುರಿತ ಅರ್ಜಿಯನ್ನು ಮುಂದಿನ ವಾರವೇ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಅರ್ಜಿದಾರರ ಸಂಘಟನೆ ಎಡಿಆರ್ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ನ್ಯಾಯಪೀಠ ಅರ್ಜಿಯನ್ನು ಮುಂದಿನ ಮಂಗಳವಾರ ಅಥವಾ ಬುಧವಾರಕ್ಕೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.
ಇದೇ ವೇಳೆ ವಿವಿಪ್ಯಾಟ್ ವಿಚಾರವಾಗಿ ಸಲ್ಲಿಸಲಾಗಿರುವ ಮತ್ತೊಂದು ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ, ನೋಟಿಸ್ ಕಳುಹಿಸಿದೆ.