ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಅಮೂಲ್ಯ ಅವರ ಮಾವ ರಾಮಚಂದ್ರ ಅವರ ಮನೆಯಲ್ಲಿ ಚುನಾವಣಾ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ರಾತ್ರಿ 10 ಗಂಟೆ ಸುಮಾರಿಗೆ 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಸಿಬ್ಬಂದಿ ಆರ್.ಆರ್.ನಗರದ ಮನೆಯೊಂದರ ಮೇಲೆ ದಾಳಿ ನಡೆಸಿ 31 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಮಚಂದ್ರ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಮನೆ ಮೇಲೆ ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಈ ಭಾಗದಲ್ಲಿ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರಿದರು.
ದಾಳಿಯ ಸಮಯದಲ್ಲಿ, RO ಗೆ ಪದೇ ಪದೇ ಕರೆಗಳು ಬಂದವು. 2 ದಿನಗಳಲ್ಲಿ ಡೆಲಿವರಿ ಸ್ವೀಕರಿಸುವಂತೆ ಫೋನ್‌ನಲ್ಲಿ ಹೇಳಿದರು. ಮೊಮ್ಮಗನ ಹುಟ್ಟುಹಬ್ಬಕ್ಕೆ ಮದ್ಯ ತಂದಿದ್ದೆ. ಚುನಾವಣೆ ಸಂದರ್ಭದಲ್ಲಿ ಹೆಚ್ಚು ಬರ್ತ್‌ಡೇ ಪಾರ್ಟಿಗಳು ಬೇಡ ಎಂದು ಹೇಳಿದ್ದೆವು. ಈ ಭಾಗದಲ್ಲಿ ಬಿಜೆಪಿ 18,000 ಮುನ್ನಡೆ ಸಾಧಿಸಲಿದೆ. ಇದನ್ನು ಸಹಿಸಲಾಗದೇ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ರಾಮಚಂದ್ರ ಆರೋಪಿಸಿದ್ದಾರೆ.