Sunday, December 3, 2023

Latest Posts

ಮಾಜಿ ಸಿಎಂ ಬೊಮ್ಮಾಯಿ ಶಸ್ತ್ರಚಿಕಿತ್ಸೆ ಯಶಸ್ವಿ: ಆರೋಗ್ಯದಲ್ಲಿ ಚೇತರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ (Fortis Hospital) ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ (Bypass Grafting) ನಡೆಸಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮೊಣಕಾಲು ನೋವಿನಿಂದ ಸಂಕಟ ಅನುಭವಿಸುತ್ತಿದ್ದ ಬಸವರಾಜ ಬೊಮ್ಮಾಯಿಯವರು ಅದಕ್ಕಾಗಿ ಚಿಕಿತ್ಸೆ ಪಡೆದಿದ್ದರು.
ಇದೇ ವೇಳೆ ಪ್ರಾಥಮಿಕ ಪರೀಕ್ಷೆ ನಡೆಸಲಾಯಿತು, ಈ ವೇಳೆ ಅವರಿಗೆ ಹೃದಯ ಸಂಬಂಧಿ ಕೆಲ ಸಮಸ್ಯೆ ಇರುವ ಅನುಮಾನ ಮೂಡಿತು. ಹೀಗಾಗಿ, ಅವರ ಸಮಗ್ರ ಮತ್ತು ಪರಿಣಿತ ವೈದ್ಯಕೀಯ ಆರೈಕೆಗಾಗಿ, ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್‌ ಸೈನ್ಸ್‌ ಅಧ್ಯಕ್ಷರಾದ ಡಾ. ವಿವೇಕ್‌ ಜವಳಿ ಅವರ ಮೇಲ್ವಿಚಾರಣೆಯಲ್ಲಿ ಅಕ್ಟೋಬರ್‌ 15ರಂದು ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ಆಂಜಿಯೋಗ್ರಾಮ್ ನಂತರ, ಎಲ್ಲಾ ಮೂರು ಪರಿಧಮನಿಯ ಅಪಧಮನಿಗಳಲ್ಲಿ ತೀವ್ರ ಮತ್ತು ಪ್ರಸರಣ ತಡೆ ಇರುವುದು ಕಂಡು ಬಂತು. ಈ ಲಕ್ಷಣಗಳು ಇದ್ದರೆ ಭವಿಷ್ಯದಲ್ಲಿ ಹೃದಯಾಘಾತ ಸಂಭವನೀಯ ಅಪಾಯವನ್ನು ಉಂಟುಮಾಡುತ್ತವೆ, ಹೀಗಾಗಿ ಅವರಿಗೆ ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಕ್ರಿಯೆಯನ್ನು ನಡೆಸಿ, ಫೈವ್‌ ಗ್ರಾಫ್ಸ್‌ನನ್ನು ಸಮಸ್ಯೆ ಉಂಟಾಗಿದ್ದ ಪರಿಧಮನಿಯ ಅಪಧಮನಿ ಹೃದಯದ ಬಡಿತದ ಮೇಲೆ ಇರಿಸಲಾಯಿತು. ಶಸ್ತ್ರಚಿಕಿತ್ಸೆಯ ಬಳಿಕ ಬೊಮ್ಮಾಯಿ ಅವರು ವೇಗವಾಗಿ ಚೇತರಿಕೆ ಕಾಣುತ್ತಿದ್ದು, ಒಂದೆರಡು ವಾರದಲ್ಲಿ ಎಂದಿನಂತೆ ತಮ್ಮ ದಿನಚರಿಯಲ್ಲಿ ತೊಡಗಿಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಡಿ.ಕೆ. ಶಿವಕುಮಾರ್‌ ಭೇಟಿಯಾದರು.
ಈ ನಡುವೆ ಶನಿವಾರ ಮುಂಜಾನೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಫೋರ್ಟಿಸ್‌ ಅಸ್ಪತ್ರೆಗೆ ಭೇಟಿ ನೀಡಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಸಂಜೆಯ ಹೊತ್ತಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬೊಮ್ಮಾಯಿ ಅವರನ್ನು ಭೇಟಿಯಾಗಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!