ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ಐಸಿಯುಗೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಬೊಮ್ಮಾಯಿ ಅವರ ಶಸ್ತ್ರಕಿತ್ಸೆ ನಡೆದಿದ್ದು, ಇದೀಗ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಬೊಮ್ಮಾಯಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.