ಹೊಸದಿಗಂತ ವರದಿ ಮಡಿಕೇರಿ:
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಮಡಿಕೇರಿಗೆ ಭೇಟಿ ನೀಡಿದ್ದು, ಇಲ್ಲಿನ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪತ್ನಿ ಅನಿತಾ ಹಾಗೂ ಮಾಜಿ ಶಾಸಕ ಸಾ.ರಾ. ಮಹೇಶ್ ಜತೆಗೆ ನಗರಕ್ಕೆ ಅಗಮಿಸಿರುವ ಕುಮಾರಸ್ವಾಮಿ, ಮಂಗಳವಾರ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇರುವುದಾಗಿ ಹೇಳಲಾಗಿದೆ.
ಕೊಡಗಿನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೆರವಾಗಿರುವ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆ ರಾಜಕೀಯಾಸಕ್ತರಲ್ಲಿ ಕುತೂಹಲ ಮನೆಮಾಡಿದೆ.