ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಹೆಚ್‌.ಡಿ.ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರಾಗಿದೆ. ಚುನಾವಣೆ ಗೆಲ್ಲಲು ಎಲ್ಲಾ ಪಕ್ಷಗಳು ತಮ್ಮ ಪ್ರಚಾರವನ್ನು ಚುರುಕುಗೊಳಿಸುತ್ತಿವೆ. ರಾಜ್ಯದಲ್ಲಿ ಚುನಾವಣಾ ಬಿಸಿ ತಾರಕಕ್ಕೇರಿದೆ. ಪ್ರಚಾರ, ಸಭೆಗಳು ಜೋರಾಗಿ ನಡೆಯುತ್ತಿವೆ. ಸ್ಥಳೀಯ ನಾಯಕರಿಂದ ಹಿಡಿದು ರಾಷ್ಟ್ರೀಯ ನಾಯಕರವರೆಗೂ ಚುನಾವಣೆಯ ಧಾವಂತದಲ್ಲಿದ್ದಾರೆ. ಇಂತಹ ನಿರ್ಣಾಯಕ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಅಸ್ವಸ್ಥರಾಗಿದ್ದು, ವೈದ್ಯರ ಸೂಚನೆಯಂತೆ ಶನಿವಾರ ಸಂಜೆ ಕುಮಾರಸ್ವಾಮಿಯವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚುನಾವಣಾ ಕಾಲವಾದ್ದರಿಂದ ಕುಮಾರಸ್ವಾಮಿ ರಾಜ್ಯಾದ್ಯಂತ ವ್ಯಾಪಕ ಪ್ರವಾಸ ಮಾಡಬೇಕಿತ್ತು. ಅನಾರೋಗ್ಯದ ಕಾರಣ ಭಾನುವಾರ ಕೈಗೊಳ್ಳಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಅವರ ಆರೋಗ್ಯದ ಬಗ್ಗೆ ಪಕ್ಷದ ಕಾರ್ಯಕರ್ತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಕುಮಾರಸ್ವಾಮಿ, ಚೇತರಿಸಿಕೊಂಡ ಬಳಿಕ ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!