ಮಾಜಿ ಸಚಿವ ಈಶ್ವರಪ್ಪಗೆ ನಿರಾಸೆ, ಮಗನಿಗಿಲ್ಲ ಟಿಕೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀವ್ರ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದ್ದು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರಾಶರಾಗಿದ್ದಾರೆ.

ಇತ್ತೀಚೆಗಷ್ಟೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು.

ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಅಥವಾ ತಮ್ಮ ಸೊಸೆಗೆ ಟಿಕೆಟ್ ನೀಡುವ ನಿರೀಕ್ಷೆ ಇಟ್ಟಿದ್ದರು. ಆದರೆ ನಿರೀಕ್ಷೆ ಹುಸಿಯಾಗಿದ್ದು, ಶಿವಮೊಗ್ಗದಿಂದ ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಇಂದು ರಾತ್ರಿ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದ್ದು, ಶಿವಮೊಗ್ಗದಿಂದ ಚನ್ನಬಸಪ್ಪ ಹಾಗೀ ನಿನ್ನೆಯಷ್ಟೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಸಂಸದ ಬಿ.ವಿ. ನಾಯಕ್ ಅವರಿಗೆ ಮಾನ್ವಿ ಟಿಕೆಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!