ಹೊಸದಿಗಂತ ವರದಿ,ಬೆಂಗಳೂರು:
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ, ಮಾಜಿ ಸಚಿವ ಕೆ. ಗೋಪಾಲಯ್ಯ ಅವರಿಗೆ ಜೀವ ಬೆದರಿಕೆಯೊಡ್ಡಿರುವ ಆರೋಪದಡಿ ಬಿಬಿಎಂಪಿ ಬಸವೇಶ್ವರನಗರ ವಾರ್ಡ್‌ನ ಮಾಜಿ ಕಾರ್ಪೋರೇಟರ್ ಪದ್ಮರಾಜ್ ವಿರುದ್ಧ ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಫೆ.೧೩ ರ ತಡರಾತ್ರಿ ೧೧ ಗಂಟೆ ಸುಮಾರಿಗೆ ಗೋಪಾಲಯ್ಯ ಅವರಿಗೆ ಕರೆ ಮಾಡಿದ ಪದ್ಮರಾಜ್, ತಮಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಜತೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗೋಪಾಲಯ್ಯ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಪದ್ಮರಾಜ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆತಂದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರಿಂದಲೂ ಹೇಳಿಕೆ ಪಡೆದುಕೊಳ್ಳಲಾಗಿದ್ದುಘಿ, ಇನ್ನೂ ಸತ್ಯಾಸತ್ಯತೆ ಕುರಿತು ತನಿಖೆಯಾಗಬೇಕಿದೆ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ.
ಗೋಪಾಲಯ್ಯ ಹಾಗೂ ಪದ್ಮರಾಜ್ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇರಲಿಲ್ಲವಾದರೂ ನನಗೆ ಕರೆ ಮಾಡಿ ಹಣವನ್ನು ನೀಡಬೇಕು. ನೀಡದಿದ್ದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲಘಿ. ಹುಡುಗರನ್ನು ಕರೆಸಿ ಇಡೀ ಕುಟುಂಬವನ್ನು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ಕುಟುಂಬಕ್ಕೆ ಹಾನಿಯಾದರೆ ಅದಕ್ಕೆ ನೇರವಾಗಿ ಪದ್ಮರಾಜ್ ಹೊಣೆಗಾರರಾಗಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಟೆಂಡರ್‌ಗಾಗಿ ೧೫ ಲಕ್ಷ ರೂ. ನೀಡಿದ್ದೆ:
ಇನ್ನೂ ಪೊಲೀಸರ ವಿಚಾರಣೆಯಲ್ಲಿ ಪದ್ಮರಾಜ್, ತಾನೇ ಗೋಪಾಲಯ್ಯ ಅವರಿಗೆ ೧೫ ಲಕ್ಷ ರೂ. ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಚಿವರಾಗಿದ್ದ ಸಮಯದಲ್ಲಿ ಗೋಪಾಲಯ್ಯನವರಿಗೆ ಟ್ರಸ್ಟ್‌ಗಾಗಿ ಹಾಗೂ ಕಾಮಗಾರಿಯ ಟೆಂಡರ್ ಪಡೆದುಕೊಳ್ಳಲು ೧೫ ಲಕ್ಷ ರೂ. ಹಣ ನೀಡಿದ್ದುಘಿ, ನನ್ನ ಹಣವನ್ನು ಕೇಳಲು ಮನೆಯ ಬಳಿಗೆ ಹೋದಾಗ ಅವರು ಮನೆಯಲ್ಲಿ ಇರಲಿಲ್ಲಘಿ. ಆದ್ದರಿಂದ ಕರೆ ಮಾಡಿದ್ದೆ, ಆಗ ಗೋಪಾಲಯ್ಯನವರೇ ನನಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ವಿಚಾರಣೆಯಲ್ಲಿ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.