ಮತ್ತೆ ರಾಜ್ಯ ರಾಜಕಾರಣಕ್ಕೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಎಂಟ್ರಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತೆ ಸಕ್ರೀಯ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರಾ ಎಂಬ ಕುತೂಹಲ ಶುರುವಾಗಿದೆ. ಹೌದು, ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲುವಾಸ ಅನುಭಿಸಿ, ಜೈಲಿನಿಂದ ಬಿಡುಗಡೆ ಹೊಂದಿ, ಹೊರ ಬಂದಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಬಳಿಕ ರಾಜಕೀಯ ರಂಗದಿಂದ ದುರುಳ ಉಳಿದಿದ್ದರು. ಇದೀಗ ಮತ್ತೆ ಆಗಮನಕ್ಕೆ ತೆರೆ ಮರೆಯಲ್ಲಿ ವೇದಿಕೆ ಕೂಡ ಸಿದ್ಧಗೊಳ್ಳುತ್ತಿದೆ ಎನ್ನಲಾಗುತ್ತಿದೆ.
ಇಂದು ವಿಜಯನಗರದ ಹರಪನಹಳ್ಳಿಯಲ್ಲಿ ಏರ್ಪಡಿಸಿದ್ದ ಸೀತಾರಾಮ ಕಲ್ಯಾಣ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ಶಾಸಕರು, ಸಂಸದರು , ಶಾಸಕರಾದ ಜಿ. ಕರುಣಾಕರ ರೆಡ್ಡಿ, ಸೋಮಶೇಖರ್‌ ರೆಡ್ಡಿ, ಗಾಲಿ ಜನಾರ್ದನ ರೆಡ್ಡಿ, ಸಾರಿಗೆ ಸಚಿವ ಬಿ. ಶ್ರೀರಾಮುಲು ಪಾಲ್ಗೊಂಡಿದ್ದರು. ಇಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಶಾಸಕ, ಸಚಿವ, ಸಿ.ಎಂ. ಆಗಬೇಕೆಂಬ ಆಸೆ ನನಗಿಲ್ಲ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲು ನಾನು ಕೂಡ ಕೆಲಸ ಮಾಡಲು ಸಿದ್ಧ. ಹಿಂದೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಸಿ.ಎಂ. ಮಾಡಲು ಶ್ರಮಿಸಿದ್ದೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ. ಬಿಜೆಪಿ ಖಂಡಿತವಾಗಿಯೂ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.
ಇದೇ ಬಸವರಾಜ ಬೊಮ್ಮಾಯಿ ಮಾತನಾಡಿ, ಜನಾರ್ದನ ರೆಡ್ಡಿ ಅವರ ಮಾತುಗಳನ್ನು ಕೇಳಿ ಸಂತೋಷವಾಗಿದೆ. ಎಲ್ಲರೂ ಒಗ್ಗಟ್ಟಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ಅನೇಕ ವರ್ಷಗಳ ಕಾಲ ಬಳ್ಳಾರಿಯಲ್ಲಿ ಕೆಲವೇ ಮನೆತನದವರ ಪ್ರಭಾವ ಇತ್ತು. ಆದರೆ, ರೆಡ್ಡಿ ಸಹೋದರರು, ಶ್ರೀರಾಮುಲು ಅವರು ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿ, ಜನರ ಪ್ರೀತಿ ವಿಶ್ವಾಸ ಗಳಿಸಿ ಬಿಜೆಪಿಯ ಬಾವುಟ ಹಾರಿಸಲು ಶ್ರಮಿಸಿದರು ಎಂದು ಕೊಂಡಾಡಿದರು.
ಅಂದಹಾಗೇ, ಜನಾರ್ಧನ ರೆಡ್ಡಿ ಹಲವು ವರ್ಷಗಳಿಂದ ದೂರವೇ ಉಳಿದಿದ್ದಾರೆ. ಕಳೆದ 2008ರಲ್ಲಿ ರಚನೆಯಾಗಿದ್ದ ಬಿಜೆಪಿ ಸರ್ಕಾರದಲ್ಲಿ ಜನಾರ್ಧನ ರೆಡ್ಡಿ ಪ್ರವಾಸೋದ್ಯಮ ಸಚಿವರಾಗಿದ್ದರು. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಕೆಲ ವರ್ಷ ಜೈಲುವಾಸ ಅನುಭವಿಸಿದ್ದ ಅವರು, ಜೈಲಿನಿಂದ ಬಿಡುಗಡೆ ಹೊಂದಿರುವ ಅವರಿಗೆ, ಬಳ್ಳಾರಿ‌ ಪ್ರವೇಶಕ್ಕೆ ಅನುಮತಿ‌ ನೀಡಿರಲಿಲ್ಲ. ಬಳಿಕ ಕಳೆದ ವರ್ಷದವಷ್ಟೇ ಬಳ್ಳಾರಿ ಭೇಟಿಗೆ ಅವಕಾಶವನ್ನು ಸುಪ್ರೀಂಕೋರ್ಟ್ ನೀಡಿತ್ತು.

ಕಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!