ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಸಿಕ್ಕಿದೆ. ಇಂದು ಅವರು ಜೈಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಸೋಮವಾರ ಸಂಜೆ ಕೋರ್ಟ್ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದಲ್ಲಿ ಜುಲೈ 12 ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. 2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.