Monday, October 13, 2025

ಮಾಜಿ ಸಚಿವ ಸುರೇಶ್ ಕುಮಾರ್​​​ಗೆ ಮಾತೃವಿಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ (ಸೆ.23) ವಿಧಿವಶರಾಗಿದ್ದಾರೆ.

ಈ ಕುರಿತು ಸ್ವತಃ  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು ಎಂದು ಬರೆದಿದ್ದಾರೆ. 

ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿ ಬಳಿಕ ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್​ನ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಟ್ಟು 8 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

error: Content is protected !!