ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಲಾಗಿದ್ದು, ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ.ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿರುವ ಪೊಲೀಸರು ಇಂದು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದ ಆರೋಪವಿದ್ದು, ತನಿಖೆ ನಡೆಸಿದ ಸಿಐಡಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಿತ್ತು.