ಹೊಸದಿಗಂತ ವರದಿ ಪುತ್ತೂರು:
ವಿಷ ಜಂತು ಕಡಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಮುರಳೀಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ. ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು, ಕೆ.ಜೀವಂಧರ ಜೈನ್, ವಿಶ್ವೇಶ್ವರ ಭಟ್ ಬಂಗಾರಡ್ಕ ಮತ್ತಿತರರು ಉಪಸ್ಥಿತರಿದ್ದರು.
ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಾತ್ರಿ ವೇಳೆ ತನ್ನ ಮನೆಯ ಬಳಿ ವಾಕಿಂಗ್ ಮಾಡುವಾಗ ಅವರಿಗೆ ವಿಷಜಂತು ಕಡಿದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೃಷ್ಡವತಶಾತ್ ಕಡಿತ ತರಚಿದಂತ ಗಾಯವಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.
ಇಂದು ತಾನು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವುದಾಗಿ ಸಂಜೀವ ಮಠಂದೂರು ತಿಳಿಸಿದ್ದಾರೆ.