ಹೊಸದಿಗಂತ ವರದಿ, ಗದಗ:
ಬೆಂಗಳೂರಿನಲ್ಲಿ ನಿಧನರಾದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರ ಪಾರ್ಥಿವ ಶರೀರವು ಶನಿವಾರ ಬೆಳಗಿನ ಜಾವಾ ನಗರಕ್ಕೆ ಆಗಮಿಸಿತು. ನಂತರ ಹುಡ್ಕೋ ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಕೂಡಲ ಸಂಗಮದ ಬಸವಜಯಮೃತ್ಯುಂಜಯ ಶ್ರೀಗಳು, ಶಾಸಕ ಡಾ.ಎಚ್.ಕೆ ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಮಾಜಿ ಶಾಸಕ ಎನ್. ಎಚ್. ಕೋನರೆಡ್ಡಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ಜಿಪಂ ಮಾಜಿ ಅಧ್ಯಕ್ಷ ಸಿದ್ದಲಿಂಗೇಶ ಪಾಟೀಲ ಸೇರಿದಂತೆ ಹಲವಾರು ಗಣ್ಯರು, ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರುಗಳು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ನಂತರ ೧೧ ಗಂಟೆಗೆ ಎಸ್‌ಎಂ.ಕೃಷ್ಣ ನಗರದಲ್ಲಿರುವ ಗದಗ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಲಾಯಿತು ಅಲ್ಲಿಂದ ತವರು ಕ್ಷೇತ್ರ ಸೂಡಿ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ಕೊಂಡ್ಯೊಯಲಾಯಿತು. ಸಂಜೆ ವೇಳೆ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ಮಾಡಲಾಯಿತು.
: