ಕಾಂಗ್ರೆಸ್ ಗೆ ಕೈ ಕೊಟ್ಟ ಮಾಜಿ ಶಾಸಕ: ಟಿಕೆಟ್ ವಂಚಿತ ಪ್ರಸನ್ನಕುಮಾರ್ ಜೆಡಿಎಸ್ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಕಾಂಗ್ರೆಸ್ ಟಿಕೆಟ್ ವಂಚಿತ ಪ್ರಸನ್ನ ಕುಮಾರ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಪ್ರಸನ್ನಕುಮಾರ್ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷ ಸೇರಿದ್ದಾರೆ. ಇದರಿಂದಾಗಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕಿಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!