ಮಾಜಿ ಸಂಸದ ಮೂಡಲಗಿರಿಯಪ್ಪ ನಿಧನ: ನಾಳೆ ಬೆಳಗ್ಗೆ ತೋಟದಲ್ಲಿ ಅಂತ್ಯಸಂಸ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಂಸದ ಮೂಡಲಗಿರಿಯಪ್ಪ(84) ಅನಾರೋಗ್ಯದಿಂದಾಗಿ ಇಂದು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಮೂಡಲಗಿರಿಯಪ್ಪ ಅವರು ಬಳಲುತ್ತಿದ್ದು, ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಉಸಿರಾಟದ ತೊಂದರೆಯಷ್ಟೇ ಅಲ್ಲದೆ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಾಳೆ ಬೆಳಗ್ಗೆ ಚಿರತಹಳ್ಳಿ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!