Thursday, September 29, 2022

Latest Posts

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ?: ಪಿಟಿಐ ಕಾರ್ಯಕರ್ತರಿಂದ ಪ್ರತಿಭಟನೆಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.ಈ ಹಿನ್ನೆಲೆ ಪಿಟಿಐ ತನ್ನ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಗಳನ್ನು ನಡೆಸುವಂತೆ ಕರೆ ನೀಡಿದೆ.

ರಾಜಧಾನಿ ಇಸ್ಲಾಮಾಬಾದ್​ನ ಸೆಷನ್ಸ್​ ನ್ಯಾಯಾಧೀಶ ಝೇಬಾ ಚೌಧರಿ ಅವರನ್ನು ಬೆದರಿಸಿದ ಆರೋಪ ಮೇಲೆ ನ್ಯಾಯಾಧೀಶ ಅಲಿ ಜಾವೇದ್ ಇಮ್ರಾನ್ ಖಾನ್ ವಿರುದ್ಧ ಭಯೋತ್ಪಾದನೆಯ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಇಮ್ರಾನ್ ಬಂಧಿಸುವ ಸಾಧ್ಯತೆಗಳಿವೆ.
ಶನಿವಾರ ಎಫ್​9 ಪಾರ್ಕ್​ನಲ್ಲಿ ಪಿಟಿಐ ರ್ಯಾಲಿಯನ್ನುದ್ದೇಶಿಸಿ ಇಮ್ರಾನ್ ಖಾನ್ ಮಾತನಾಡಿದ್ದರು. ಇದರ ನಂತರ ಅಂದು ರಾತ್ರಿ 10 ಗಂಟೆ ಸುಮಾರಿಗೆ ಮಾರ್ಗಲ್ಲಾ ಪೊಲೀಸ್ ಠಾಣೆಯಲ್ಲಿ ಇಮ್ರಾನ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಪ್ರತಿಭಟನೆಗಾಗಿ ಮಾಜಿ ಪ್ರಧಾನಿ ಇಮ್ರಾನ್ ಅವರ ಬನಿ ಗಾಲಾ ಮನೆಯ ಬಳಿ ಎಲ್ಲ ಕಾರ್ಯಕರ್ತರು ಮತ್ತು ಬೆಂಬಲಿಗರು ನೆರೆಯುವಂತೆ ಪಿಟಿಐ ಮುಖಂಡ ಫವಾದ್ ಚೌಧರಿ ಕರೆ ನೀಡಿದ್ದಾರೆ.

ಇಮ್ರಾನ್ ಖಾನ್ ಅವರ ಬನಿ ಗಾಲಾ ನಿವಾಸಕ್ಕೆ ಹೋಗುವ ಮಾರ್ಗಗಳನ್ನು ಪೊಲೀಸರು ಬಂದ್ ಮಾಡಿದ್ದು, ಅನಧಿಕೃತ ವ್ಯಕ್ತಿಗಳು ಈ ಮಾರ್ಗಗಳ ಮೂಲಕ ಪ್ರಯಾಣಿಸುವುದನ್ನು ನಿಷೇಧಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಇಮ್ರಾನ್ ಖಾನ್ ಚೌಕ್‌ನ ಬೀದಿ ದೀಪಗಳನ್ನು ಕೂಡ ಬಂದ್ ಮಾಡಲಾಗಿದೆ ಎಂದು ಪಾಕಿಸ್ತಾನದ ಪ್ರಮುಖ ಮಾಧ್ಯಮವೊಂದು ಹೇಳಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!