ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಶಾ ಮೆಹಮೂದ್ ಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಗೆ ಜಾಮೀನು ಮಂಜೂರು ಮಾಡಿದೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅವರು ಮೇ 9 ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು. ಇದೀಗ ಇಬ್ಬರೂ ನಾಯಕರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಆರ್ಥಿಕ ಮತ್ತು ರಾಜಕೀಯ ಸಂಕಷ್ಟಗಳನ್ನು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಶುಕ್ರವಾರ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಅಚ್ಚರಿಯ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿಯಾಗುವ ಕನಸು ಕಂಡಿದ್ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಿಎಂಎಲ್ ಎನ್ ಮತ್ತು ಬಿಲಾವಲ್ ಭುಟ್ಟೋ ಅವರ ಪಿಪಿಪಿ ಪಕ್ಷಗಳು ಭಾರಿ ಹಿನ್ನಡೆ ಅನುಭವಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!