ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗೆ ಇಲ್ಲ ಆಹ್ವಾನ: ಸರಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತಾರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಅನ್ನು ಪ್ರಧಾನಿ ಮೋದಿ ಅವರು ಇಂದು ಉದ್ಘಾಟಿಸಿದರು.

ಆದರೆ ಇದೀಗ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನ ಮಾಡದೇ ಇರುವುದಕ್ಕೆ ಜೆಡಿಎಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಟ್ವಿಟ್‌ ಮಾಡಿದೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡರನ್ನು
ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಮಾಡಲಾಗಿದೆ ಅಂತ ಹೇಳಿದ್ದಾರೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಕೆಂಪೇಗೌಡರು ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ರಾಜ್ಯ ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!