ಚುನಾವಣಾ ಆಯೋಗ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್‌

ತೋಷಖಾನಾ ಪ್ರಕರಣದಲ್ಲಿ 5 ವರ್ಷಗಳ ಕಾಲ ಸಾರ್ವಜನಿಕ ಹುದ್ದೆಯಿಂದ ಅನರ್ಹಗೊಳಿಸುವ ಪಾಕಿಸ್ತಾನ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪಾಕಿಸ್ತಾನದ ಉನ್ನತ ಚುನಾವಣಾ ಸಂಸ್ಥೆಯ ನಿರ್ಧಾರವನ್ನು ಇಮ್ರಾನ್ ಖಾನ್ ಶನಿವಾರ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದು, ತಮ್ಮ ವಕೀಲ ಬ್ಯಾರಿಸ್ಟರ್ ಅಲಿ ಜಾಫರ್ ಮೂಲಕ ಇಸ್ಲಾಮಾಬಾದ್ ಹೈಕೋರ್ಟ್ (IHC) ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

70 ವರ್ಷ ವಯಸ್ಸಿನ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ರಾಜಕಾರಣಿ ಇಮ್ರಾನ್ ಖಾನ್ ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಂಡರು ಮತ್ತು ತೋಷಖಾನಾ ಪ್ರಕರಣದಲ್ಲಿ ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನದ ಚುನಾವಣಾ ಆಯೋಗ ನಿರ್ಬಂಧಿಸಿದೆ.

ಶನಿವಾರ ತಕ್ಷಣವೇ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ಇಮ್ರಾನ್ ಖಾನ್ ವಕೀಲ ಜಾಫರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅವರ ಅರ್ಜಿ ಸ್ವೀಕರಿಸಿದ ನ್ಯಾಯಾಲಯ ತುರ್ತು ವಿಚಾರಣೆಯ ವಿಷಯವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!