ಮೇಕೆದಾಟು ಯೋಜನೆಗೆ ಅನುಮೋದನೆ ಕೋರಿದ ಮಾಜಿ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡರು ಮತ್ತೊಮ್ಮೆ ಮಾತನಾಡಿದ್ದಾರೆ. ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ತಮಿಳುನಾಡಿನ ಸಂಸದರು ವಿರೋಧ ವ್ಯಕ್ತಪಡಿಸಿದರು.

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ಕದನ ಮುಂದುವರಿದಿದೆ. ರಾಜ್ಯದ ಜನತೆಗೆ ಕುಡಿಯಲು ನೀರಿಲ್ಲದ ಕಾರಣ ಕಾವೇರಿ ನದಿ ನಿರ್ವಹಣಾ ಮಂಡಳಿ (ಟಿಎಂಸಿ) ಆದೇಶದ ಮೇರೆಗೆ ಕರುನಾಡ ಅಣೆಕಟ್ಟುಗಳಿಂದ ನೀರು ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗೆ ಒಂದು ಪರಿಹಾರವೆಂದರೆ ಮೇಕೆದಾಟು ಯೋಜನೆ. ಈ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಹಾ ಮೇಕೆದಾಟು ಸಮರ ನಡೆಯುತ್ತಿದೆ. ರಾಜ್ಯದ ನೀರಿನ ಪರಿಸ್ಥಿತಿ ಕುರಿತು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದರು.

ಇದಕ್ಕಾಗಿ 60 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ನನಗೆ 91 ವರ್ಷ. 10 ವರ್ಷಗಳಲ್ಲಿ 4 ಮಾತ್ರ ಸಮಸ್ಯೆ ಇರುತ್ತೆ. ನಾನು ಪ್ರಧಾನಿ ಮತ್ತು ಅವರ ಸಚಿವ ಸಂಪುಟವನ್ನು ಕೇಳುತ್ತೇನೆ. ಈ ವಿಚಾರವನ್ನು ಆಲಿಸಿ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರಕ್ಕೆ ಎಚ್‌ಡಿಡಿ ಮನವಿ ಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!