ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ದಿಗಂತ ವರದಿ ಮೈಸೂರು:
ಅರಮನೆ ನಗರಿ ಮೈಸೂರಿನಲ್ಲಿ ದಿನೇ ದಿನೇ ಮಹಾಮಾರಿ ಕೊರೋನಾ ಸೋಂಕು ಹರಡುವಿಕೆ ಹಾಗೂ ಸೋಂಕಿನಿAದ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸ್ಯಾನಿಟೈಸ್ ಮಾಡುವ ಕಾರ್ಯವನ್ನು ನಡೆಸುತ್ತಿದೆ.
ಮೈಸೂರಿನ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸ್ಯಾನಿಟೈಸ್ ನಡೆಸಿದೆ. ಕೊರೋನಾ ವೈರಾಣುಗಳ ನಾಶಕ್ಕೋಸ್ಕರ ಸ್ಯಾನಿಟೈಸ್ ಸಿಂಪಡಣೆ ಕಾರ್ಯ ನಡೆದಿದೆ. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಮರೆತು ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುವ ಕಾರಣ ಎಂ.ಜಿ.ರಸ್ತೆಯಲ್ಲಿನ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಎಂ.ಜಿ.ರಸ್ತೆಯಲ್ಲಿಯೂ ಸ್ಯಾನಿಟೈಸ್ ಕಾರ್ಯ ನಡೆದಿದೆ. ಹೆಚ್ಚಿನ ಪ್ರಮಾಣದಲ್ಲಿ ಜನರು ಸಂಚಾರ ನಡೆಸಿದ್ದ ರಸ್ತೆಗಳಲ್ಲಿ ಪ್ರಮುಖವಾಗಿ ಸ್ಯಾನಿಟೈಸ್ ಕಾರ್ಯ ನಡೆದಿದೆ.