ಪಿಎಸ್​ಐ ಹುದ್ದೆಗಳಿಗೆ ಮರು ಪರೀಕ್ಷೆಯ ದಿನಾಂಕ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 545 ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ ‌23ರ ಶನಿವಾರ ನಡೆಸಲಾಗುತ್ತದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‌ಐ‌ ಮರು ಪರೀಕ್ಷೆ ನಡೆಯುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಮರು‌ ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 11ರಂದು ಕರ್ನಾಟಕ ಹೈಕೋರ್ಟ್‌ 545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲು ಆದೇಶಿಸಿತ್ತು. ಅದರ ಅನ್ವಯ ಸರ್ಕಾರದ ಜೊತೆ ಚರ್ಚೆ ನಡೆಸಿದ ಬಳಿಕ ಕೆಇಎ ಮರು ಪರೀಕ್ಷೆ ದಿನಾಂಕವನ್ನು ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!