ಪರೀಕ್ಷಾ ಪೇ ಚರ್ಚಾ, ಪೋಷಕರು ಭಾಗಿಯಾಗಿ: ಸಚಿವ ಬಿ.ಸಿ. ನಾಗೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿ ವರ್ಷದಂತೆ ಈ ವರ್ಷವು ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೆ ಚರ್ಚಾ ನಡೆಸಲು ತೀರ್ಮಾನಿಸಿದ್ದು, ಪೋಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನವಿ ಮಾಡಿದ್ದಾರೆ.

ಫೆಬ್ರವರಿ-ಮಾರ್ಚ್‌ನಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಆರಂಭವಾಗುತ್ತದೆ. ಈ ಸಮಯದಲ್ಲಿ ಪೋಷಕರು ಮಕ್ಕಳ ಜತೆ ಕುಳಿತು ಕಾರ್ಯಕ್ರಮ ವೀಕ್ಷಿಸಿ ಎಂದು ಸಚಿವರು ಸಲಹೆ ನೀಡಿದ್ದಾರೆ.

ಯಾವುದೇ ಒತ್ತಡ ಇಲ್ಲದೆ ಪರೀಕ್ಷೆ ಬರೆಯಲು ಪ್ರೋತ್ಸಾಹಿಸಲು ಪ್ರಧಾನಿ ಮೋದಿ ಕಾರ್ಯಕ್ರಮ ನಡೆಸುತ್ತಿದ್ದು, ಕಾರ್ಯಕ್ರಮ ವೀಕ್ಷಣೆ ಸಿದ್ಧತೆ ಕುರಿತು ಚರ್ಚೆ ನಡೆಲಸಾಗಿದೆ. ಪ್ರಧಾನಿ ಮೋದಿ ಅವರ ಸಲಹೆ, ಸೂಚನೆಗಳ ಸದುಪಯೋಗ ಪಡೆದುಕೊಳ್ಳಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!