ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳ ಪರೀಕ್ಷಾ ಭಯವನ್ನು ಹೋಗಲಾಡಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ‘ಪರೀಕ್ಷಾ ಪೆ ಚರ್ಚಾ 2026’ ರ ಎರಡನೇ ಸಂಚಿಕೆಯಲ್ಲಿ ಸಂವಾದ ನಡೆಸಲಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಸಾರವಾಗಲಿದೆ. ಪರೀಕ್ಷಾ ಸಿದ್ಧತೆ, ಸಮಯ ನಿರ್ವಹಣೆ ಮತ್ತು ಒತ್ತಡ ಮುಕ್ತವಾಗಿ ಪರೀಕ್ಷೆ ಎದುರಿಸುವ ತಂತ್ರಗಳ ಬಗ್ಗೆ ಪ್ರಧಾನಿ ಸಲಹೆ ನೀಡಲಿದ್ದಾರೆ.
ಈ ಬಾರಿ ಕಾರ್ಯಕ್ರಮವು ಹೊಸ ಸ್ವರೂಪವನ್ನು ಪಡೆದುಕೊಂಡಿದ್ದು, ಪ್ರಧಾನಿಯವರು ನಾಲ್ಕು ರಾಜ್ಯಗಳ ಆಯ್ದ ಸ್ಥಳಗಳ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.
ಈ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಅವರು ಈ ಕೆಳಗಿನ ನಾಲ್ಕು ಸ್ಥಳಗಳ ವಿದ್ಯಾರ್ಥಿಗಳೊಂದಿಗೆ ಮುಖಾಮುಖಿಯಾಗಲಿದ್ದಾರೆ:
ದೇವ್‌ಮೋಗ್ರಾ (ಗುಜರಾತ್)
ಕೊಯಮತ್ತೂರು (ತಮಿಳುನಾಡು)
ರಾಯಪುರ (ಛತ್ತೀಸ್‌ಗಢ)
ಗುವಾಹಟಿ (ಅಸ್ಸಾಂ)



