ಪರೀಕ್ಷಾ ಪೆ ಚರ್ಚಾ: ಈ ಬಾರಿ ಭಾಗಿಯಾಗಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ ದೊರೆತಿದೆ.

ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿದೆ. ಈ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.

ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ.

ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!