ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶಾದ್ಯಂತ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜ್ ಗಳಲ್ಲಿ ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ (ಯುಜಿಸಿ) ಹೊಸ ಮಾರ್ಗಸೂಚಿಯಲ್ಲಿ ಸೂಚಿಸಿದೆ.
ಇನ್ನು ಸಿಬಿಎಸ್ಇ, ಐಸಿಎಸ್ ಇ ಮತ್ತು ಎಲ್ಲಾ ರಾಜ್ಯಗಳ ಬೋರ್ಡ್ ಗಳು ಫಲಿತಾಂಶ ಪ್ರಕಟಣೆ ನಂತರವಷ್ಟೇ ಪದವಿ ತರಗತಿಗಳ ದಾಖಲಾತಿ ಪ್ರಕ್ರಿಯೆ ಆರಂಭಿಸುವಂತೆ ವಿಶ್ವ ವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಸೂಚಿಸಿದೆ.ಬೋಧನೆ-ಕಲಿಕೆಯ ಪ್ರಕ್ರಿಯೆಯು ಆಫ್ಲೈನ್, ಆನ್ಲೈನ್ ಅಥವಾ ಸಂಯೋಜಿತ ಕ್ರಮದಲ್ಲಿ ಮುಂದುವರಿಯಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಅಕ್ಟೋಬರ್ 1 ರಿಂದ ಜುಲೈ 31 ರವರೆಗೆ ಕಾಲಕಾಲಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಅಗತ್ಯ ನಡವಳಿಗಳು ಮತ್ತು ಸಲಹೆಗಳನ್ನು ಪಾಲಿಸುವಂತೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಸಾಂಕ್ರಾಮಿಕ ಸಮಯದಲ್ಲಿ ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಪ್ರವೇಶ ರದ್ದತಿ ಅಥವಾ ವಲಸೆಯ ಪ್ರಕರಣಗಳಲ್ಲಿ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಶ್ವವಿದ್ಯಾನಿಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
ಆಗಸ್ಟ್ 31 ರೊಳಗೆ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಅಂತಿಮ ವರ್ಷ ಅಥವಾ ಅಂತಿಮ ಅವಧಿಯ ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯಗೊಳಿಸಲಾಗಿದೆ. ಆಫ್ ಲೈನ್ ಅಥವಾ ಅನ್ ಲೈನ್ ನಲ್ಲಿ ಪರೀಕ್ಷೆ ನಡೆಸಬಹುದಾಗಿದೆ.