ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂಧೂರ ಸಮಯದಲ್ಲಿ ಅಸಾಧಾರಣ ಶೌರ್ಯ ಪ್ರದರ್ಶಿಸಿದ್ದಕ್ಕಾಗಿ ಗಡಿ ಭದ್ರತಾ ಪಡೆಯ 16 ಸಿಬ್ಬಂದಿಗೆ ಕೇಂದ್ರ ಸರ್ಕಾರ ಶೌರ್ಯ ಪದಕ ಘೋಷಿಸಿದೆ.
ಆಪರೇಷನ್ ಸಿಂಧೂರದ ವೇಳೆ ಅಚಲ ಪರಾಕ್ರಮ, ಅಪ್ರತಿಮ ಸಾಹಸ ತೋರಿದ್ದಕ್ಕಾಗಿ 16 ಬಿಎಸ್ಎಫ್ ಯೋಧರಿಗೆ ಸ್ವಾತಂತ್ರ್ಯೋತ್ಸವದಂದು ಶೌರ್ಯ ಪದಕ ನೀಡಲಾಗುವುದು. ಈ ಪದಕಗಳು ಗಡಿ ಭದ್ರತಾ ಪಡೆಯ ಮೇಲೆ ದೇಶವು ಹೊಂದಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಬಿಎಸ್ಎಫ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದೆ.