ಹೊಸದಿಗಂತ ವರದಿ ಮೈಸೂರು;
ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಸೋಮವಾರವಾದ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶಿಸಿದ್ದಾರೆ.