ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ತುಮಕೂರು ಜಿಲ್ಲೆ ಕೊರಟಗೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿಗಳು ಗಾಂಜಾವನ್ನು ಪ್ಯಾಕೆಟ್‌ಗಳಲ್ಲಿ ತುಂಬಿಸಿ ಕೊರಟಗೆರೆಯ ಬೈಲಾಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆದಿದೆ.
ಚೇತನ್, ನಾಗರಾಜ್, ಪ್ರೀತಂ, ಸಿಂಗಾರವೇಲು, ಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ 50 ಸಾವಿರ ಮೌಲ್ಯದ 960 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.