ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ವಿದ್ಯುತ್ ಬಳಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪರಿಣಾಮ ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಪರಿಗಣಿಸುತ್ತಿರುವ ಇಂಧನ ಇಲಾಖೆ ಅಧಿಕಾರಿಗಳು ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ ರಾಜ್ಯ ಇಂಧನ ಇಲಾಖೆ ಅಧಿಕಾರಿಗಳು ಗ್ರಾಹಕರ ವಿದ್ಯುತ್ ಬಳಕೆ ಮಾದರಿ ಮತ್ತು ಗ್ರಾಹಕರ ವಿದ್ಯುತ್ ಬಳಕೆಯ ಮಾದರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದು ಗೃಹ ಜ್ಯೋತಿ ಯೋಜನೆಯನ್ನು ಪಡೆಯುತ್ತಿರುವ ಗ್ರಾಹಕರ ಪಟ್ಟಿಯಲ್ಲಿ ಪರಿಷ್ಕರಣೆಗೆ ಕಾರಣವಾಗಬಹುದು.
ರಾಜ್ಯ ಸರ್ಕಾರದ ಯೋಜನೆಯ ಪ್ರಕಾರ, ಗ್ರಾಹಕರು ಸರಾಸರಿ ಬಳಕೆಯಲ್ಲಿ ಶೇಕಡಾ 10 ರಷ್ಟು ವ್ಯತ್ಯಾಸದೊಂದಿಗೆ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಹಾಲಿ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದೊಂದಿಗೆ, ವಿದ್ಯುತ್ ಬಳಕೆ ಪ್ರಮಾಣದಲ್ಲೂ ಹೆಚ್ಚಳವಾಗಿದ್ದು, ಇದು ಗೃಹಜ್ಯೋತಿ ಬಳಕೆದಾರರ ಪಟ್ಟಿ ಪರಿಷ್ಕರಣೆಗೆ ಒತ್ತಾಯಿಸಿದೆ ಎನ್ನಲಾಗಿದೆ.