ಅಬಕಾರಿ ಇಲಾಖೆ ಮಿಂಚಿನ ಕಾರ್ಯಾಚರಣೆ: 50 ಲಕ್ಷ ಮೌಲ್ಯದ ಮದ್ಯ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆಆರ್‌ಪುರ ಹಾಗೂ ಮಹದೇವಪುರ ವಲಯಗಳ ಅಬಕಾರಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ಮಾಡಿದ್ದು, 50 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.

ಗೋವಾದಿಂದ ಅಕ್ರಮವಾಗಿ ನಗರಕ್ಕೆ ಸರಬರಾಜು ಮಾಡುತ್ತಿದ್ದ ಕಂಟೇನರ್‌ನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಮದ್ಯದ ಬಾಕ್ಸ್‌ಗಳ ಮೇಲೆ ಟಾರ್ಪಲ್ ಮುಚ್ಚಿ ಸಾಗಾಟ ಮಾಡಲಾಗಿತ್ತು.

ಯಾವ ಚೆಕ್‌ಪೋಸ್ಟ್‌ನಲ್ಲಿಯೂ ಸಿಕ್ಕಿಹಾಕಿಕೊಳ್ಳದೇ ಗೋವಾದಿಂದ ಕರ್ನಾಟಕಕ್ಕೆ ಬಂದಿದ್ದ ಗಾಡಿ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು. ಚಾಲಕ ಅಮಿತ್ ಹಾಗೂ ಪರಮೇಶ್ ಎನ್ನುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ, ಮೇಲ್ನೋಟಕ್ಕೆ ಇದು ನಕಲಿ ಮದ್ಯ ಎನಿಸುತ್ತದೆ, ತನಿಖೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!