Monday, December 22, 2025

ಬೊಕ್ಕಸ ತುಂಬಿಸಲು ಅಬಕಾರಿ ‘ಲೈಸೆನ್ಸ್‌’ ಅಸ್ತ್ರ: 569 ಮದ್ಯದಂಗಡಿಗಳ ಇ-ಹರಾಜಿಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮದ್ಯ ಮಾರಾಟ ಇಳಿಕೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಬಕಾರಿ ಇಲಾಖೆ, ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಬೃಹತ್ ಹೆಜ್ಜೆ ಇಟ್ಟಿದೆ. ಒಟ್ಟು 569 ಮದ್ಯದ ಸನ್ನದುಗಳ (477 ವೈನ್ ಶಾಪ್ ಹಾಗೂ 92 ಬಾರ್ & ರೆಸ್ಟೋರೆಂಟ್) ಇ-ಹರಾಜಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಮೂಲಕ ಸಾವಿರ ಕೋಟಿ ರೂ.ಗೂ ಅಧಿಕ ಆದಾಯ ಗಳಿಸುವ ಗುರಿ ಇಟ್ಟುಕೊಂಡಿದೆ.

ಪರಿಶಿಷ್ಟ ಜಾತಿಗೆ ಒಟ್ಟು ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7 ರಷ್ಟು ಮೀಸಲಾತಿ ನೀಡಲಾಗಿದೆ. ಡಿ.22ರಿಂದ ಬಿಡ್ ನೋಂದಣಿ ಆರಂಭವಾಗಲಿದ್ದು, ಜ.13 ರಿಂದ 20 ರವರೆಗೆ ನೇರ ಹರಾಜು ಪ್ರಕ್ರಿಯೆ ನಡೆಯಲಿದೆ. ವ್ಯಾಪಾರಿಗಳ ತೀವ್ರ ವಿರೋಧದ ನಡುವೆಯೂ ಸರ್ಕಾರ ಹರಾಜು ಪ್ರಕ್ರಿಯೆಗೆ ಮುಂದಾಗಿದೆ.

ಇತ್ತೀಚೆಗಷ್ಟೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ಅಕ್ರಮ ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಸರ್ಕಾರ ಹೊಸ ಲೈಸೆನ್ಸ್‌ಗಳ ಹರಾಜಿಗೆ ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

error: Content is protected !!