ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ.
ವೈದ್ಯಕೀಯ ಮಂಡಳಿಯ ಪರೀಕ್ಷೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪತ್ನಿ ಸುನಿತಾ ಕೇಜ್ರಿವಾಲ್‌ಗೆ ಅನುಮತಿ ನೀಡುವಂತೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಆದೇಶವನ್ನೂ ನ್ಯಾಯಾಲಯ ಕಾಯ್ದಿರಿಸಿದೆ.