ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಹಗರಣ ಸಂಬಂಧಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ದಿಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಮುಂದಿನ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಲಾಗಿದೆ.
ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಎಂ.ಕೆ. ನಾಗ್‌ಪಾಲ್ ಅವರು ಈ ಆದೇಶ ನೀಡಿದ್ದಾರೆ.
ಸಿಸೋಡಿಯಾ ಅವರ ಏಳು ದಿನಗಳ ಕಸ್ಟಡಿ ವಿಚಾರಣೆ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
ಇದೇ ವೇಳೆಸಿಬಿಐ ತನಿಖೆ ನಡೆಸುತ್ತಿರುವ ಪ್ರಮುಖ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಮಂಗಳವಾರ ಮಾರ್ಚ್ ೨೫ಕ್ಕೆ ಮುಂದೂಡಿದೆ.