ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದ ಜಾರಿ ನಿರ್ದೇಶನಾಲಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮನ್ಸ್ ಜಾರಿಯಲ್ಲಿ ‘ದಾಖಲೆ’ ನಿರ್ಮಿಸುತ್ತಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಇದೀಗ ಒಂಬತ್ತನೇ ಸಮನ್ಸ್ ಜಾರಿ ಮಾಡಿದೆ!
ಜೊತೆಗೆ ಮಾ.21ರಂದು ಖುದ್ದು ತನಿಖೆಗೆ ಹಾಜರಾಗುವಂತೆ ಸೂಚಿಸಿದೆ.
ಇದುವರೆಗೆ ಎಂಟು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಅದನ್ನು ಪಾಲಿಸದ ಕೇಜ್ರಿವಾಲ್ ವಿರುದ್ಧ ಇಡಿ ನ್ಯಾಯಾಲಯದ ಮೊರೆ ಹೋಗಿತ್ತು. ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯ ಕೇಜ್ರಿವಾಲ್‌ಗೆ 5 ಸಾವಿರ ರೂ. ವೈಯಕ್ತಿಕ ಬಾಂಡ್‌ನಲ್ಲಿ ಜಾಮೀನು ನೀಡಿ ಆದೇಶ ನೀಡಿತ್ತು.
ಇದೀಗ ಒಂಭತ್ತನೇ ಸಮನ್ಸ್ ಜಾರಿಯಾಗಿದ್ದು, ದಿಲ್ಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೇಳಲಾಗಿದೆ. ಜೊತೆಗೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!