ಅಬಕಾರಿ ನೀತಿ ಹಗರಣ: ಇಂದು ದೆಹಲಿ ನ್ಯಾಯಾಲಯದಲ್ಲಿ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ಇಂದು ವಿಚಾರಣೆ ನಡೆಸಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಸಿಸೋಡಿಯಾ ಅವರನ್ನು ಬಂಧಿಸಿತ್ತು. ನ್ಯಾಯಾಧೀಶರು ಸಿಸೋಡಿಯಾ ಅವರನ್ನು ಮಾರ್ಚ್ 20ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸುವ ಮೊದಲು ಸಿಬಿಐ ವಶಕ್ಕೆ ಏಳು ದಿನಗಳ ಕಾಲ ನೀಡಲಾಗಿತ್ತು.

ಆರೋಪಿಯ ಜಾಮೀನು ಅರ್ಜಿಗೆ ಶುಕ್ರವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಧೀಶರು ಸಿಬಿಐಗೆ ಸೂಚಿಸಿದ್ದಾರೆ.

ಸಿಸೋಡಿಯಾ ಅವರನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೋರ್ಟ್‌ಗೆ ಹಾಜರು ಪಡಿಸುವಂತೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.

ಈ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು 10 ದಿನಗಳ ಕಸ್ಟಡಿಗೆ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!