February 27, 2026
Friday, February 27, 2026
spot_img

ಅಬಕಾರಿ ನೀತಿ ಹಗರಣ: ‘ಸತ್ಯಮೇವ ಜಯತೇ’…ಕೋರ್ಟ್ ತೀರ್ಪು ಬೆನ್ನಲ್ಲೇ ಖುಷಿ ಹಂಚಿಕೊಂಡ ಕವಿತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತೆಲಂಗಾಣ ಜಾಗೃತಿ ಸಂಸ್ಥಾಪಕಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಶುಕ್ರವಾರ ದೋಷಮುಕ್ತಗೊಳಿಸಿದ್ದಾರೆ.

ಈ ಬಳಿಕ ಕೆ ಕವಿತಾ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ‘ಸತ್ಯಮೇವ ಜಯತೇ’ ಎಂದು ಹೇಳಿದ್ದಾರೆ

ಅದಾದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ನ್ಯಾಯಾಂಗವು ಸುಳ್ಳಿನ ಜಾಲವನ್ನು ಕತ್ತರಿಸಿದೆ ಎಂದು ಹೇಳಿದರು.

ಇದೇ ವೇಳೆ ತಮ್ಮ ಕಷ್ಟದ ಸಮಯದಲ್ಲಿ ಪತಿ, ಅತ್ತೆ, ಮಾವ ಮತ್ತು ಪೋಷಕರು ಸೇರಿದಂತೆ ಕುಟುಂಬ ಸದಸ್ಯರು ಮತ್ತು ತೆಲಂಗಾಣ ಜಾಗೃತಿ ಕಾರ್ಯಕರ್ತರು ತಮ್ಮ ಬೆಂಬಲಕ್ಕೆ ನಿಂತಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದರು.

ನನ್ನ ಮಕ್ಕಳ ಜೊತೆ ಕಳೆಯಬೇಕಿದ್ದ ಸಮಯವನ್ನು ನಾನು ಜೈಲಿನಲ್ಲಿ ಕಳೆದುಕೊಂಡಿದ್ದಕ್ಕೆ ಯಾರು ಜವಾಬ್ದಾರರು? ನನ್ನ ಕುಟುಂಬವನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಯಾರು ಹೊಣೆ. ತನಗಾಗಿರುವ ಕಿರುಕುಳ ಮತ್ತು ಸಾರ್ವಜನಿಕ ಸಭೆಗಳಲ್ಲಿ ನಿಂದನೆಗಳಿಗೆ ಯಾರು ಉತ್ತರಿಸುತ್ತಾರೆ’ ಎಂದು ಪ್ರಶ್ನಿಸಿದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ 2024ರ ಮಾರ್ಚ್‌ನಲ್ಲಿ ಬಂಧನಕ್ಕೊಳಗಾಗಿದ್ದ ಕವಿತಾ, ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಅದೇ ವರ್ಷ ಆಗಸ್ಟ್ 29 ರಂದು ದೆಹಲಿಯ ತಿಹಾರ್ ಜೈಲಿನಿಂದ ಹೊರಬಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !