Thursday, October 6, 2022

Latest Posts

ಅಬಕಾರಿ ಹಗರಣ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಸಿಬಿಐ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ಸಿಬಿಐ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಸಿಸೋಡಿಯಾ ಅವರ ನಿವಾಸ ಸೇರಿದಂತೆ 21 ಸ್ಥಳಗಳಲ್ಲಿ ಶೋಧ ನಡೆಸಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಹೊರತಂದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಈ ಸಂಬಂಧ ಎಎಪಿ ನಾಯಕನ ಮನೆ, ಐಎಎಸ್ ಅಧಿಕಾರಿ ಮತ್ತು ಮಾಜಿ ಅಬಕಾರಿ ಆಯುಕ್ತ ಅರವ್ ಗೋಪಿ ಕೃಷ್ಣ ಅವರ ನಿವಾಸ ಮತ್ತು ಇತರ 19 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!