ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್: ಚೆನ್ನೈಗೆ 192 ರನ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಡೆವಿಡ್ ವಾರ್ನರ್ , ಪೃಥ್ವಿ ಶಾ ಹಾಗೂ ರಿಷಬ್ ಪಂತ್ ಅಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್ ನಷ್ಟಕ್ಕೆ 191 ರನ್ ಸಿಡಿಸಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಹೋರಾಟ ಡೆಲ್ಲಿ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ಸ್ಫೋಟಕ ಬ್ಯಾಟಿಂಗ್ ಮೂಲಕ ವಾರ್ನರ್ ಹಾಫ್ ಸೆಂಚುರಿ ಸಿಡಿಸಿದರು. ಡೇವಿಡ್ ವಾರ್ನರ್ 35 ಎಸೆತದಲ್ಲಿ 52 ರನ್ ಸಿಡಿಸಿ ಔಟಾದರು.

ಇದರ ಬೆನ್ನಲ್ಲೇ ಪೃಥ್ವಿ ಶಾ ವಿಕೆಟ್ ಪತನಗೊಂಡಿತು ಕೇವಲ 27 ಎಸೆತದಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 43 ರನ್ ಸಿಡಿಸಿ ಔಟಾದರು.

ನಾಯಕ ರಿಷಬ್ ಪಂತ್ ಬ್ಯಾಟಿಂಗ್ ಡೆಲ್ಲಿ ತಂಡದ ಕೈಹಿಡಿಯಿತು. ಅಬ್ಬರಿಸಿದ ಪಂತ್ ಹಾಫ್ ಸೆಂಚುರಿ ಸಿಡಿಸಿದರು. ಪಂತ್ 31 ಎಸೆತದಲ್ಲಿ 52 ರನ್ ಸಿಡಿಸಿದರು.ಮಿಚೆಲ್ ಮಾರ್ಶ್ 18 ರನ್ ಸಿಡಿಸಿ ಔಟಾದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!