ಕರ್ನಾಟಕದ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ: ಕನ್ನಡದಲ್ಲೇ ಟ್ವೀಟ್ ಮಾಡಿ ರಾಜ್ಯಕ್ಕೆ ಬರಲು ಸಜ್ಜಾದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಾಳೆಯ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಈ ಕುರಿತು ಸ್ವತಃ ಅವರೇ ಕನ್ನಡಲ್ಲೇ ಟ್ವೀಟ್ ಮಾಡಿದ್ದಾರೆ.

‘ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಹೆಲಿಪ್ಯಾಡ್ಗೆ ತೆರಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here