ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಿರ್ಮಾಪಕ ಹಾಗೂ ಜೆಟ್ ಲಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅವರ ಮಗಳ ವಿವಾಹ ಮಾಡಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಸೌಂದರ್ಯ ಜಗದೀಶ್ ಅಪಾರ ಸಾಲವನ್ನು ಮಾಡಿದ್ದರು ಎನ್ನಲಾಗಿದೆ. ಜೊತೆಗೆ ಇತ್ತೀಚೆಗಷ್ಟೇ ಮನೆಯನ್ನು ಬ್ಯಾಂಕ್ ಸ್ವಾಧೀನಕ್ಕೆ ತೆಗೆದುಕೊಂಡಿತ್ತು. ಇದರಿಂದ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ ಹಿಂದೆ ಪೊಲೀಸರು ಜೆಟ್ ಲ್ಯಾಗ್ ಮೇಲೆ ದಾಳಿ ನಡೆಸಿದ್ದರು. ಈ ಎಲ್ಲಾ ಸಂದರ್ಭಗಳು ಅವರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
ಸೌಂದರ್ಯ ಜಗದೀಶ್ ಆತ್ಮಹತ್ಯೆ ಕನ್ನಡ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದ್ದು, ನಿರ್ಮಾಪಕರ ಆತ್ಮಹತ್ಯೆಯ ಸತ್ಯಾಸತ್ಯತೆ ತನಿಖೆಯಿಂದಲೇ ಹೊರಬರಬೇಕಿದೆ.