ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು: ಮುಹೂರ್ತ ಅವತ್ತೇನಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಂಕ್ರಾಂತಿ ಮುನ್ನವೇ ಕೇಂದ್ರದ ಮೋದಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಜನವರಿ 14ರೊಳಗೆ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆಯಂತೆ. ಈ ಕ್ರಮದಲ್ಲಿ ಕೆಲ ಸಚಿವರ ಕಾರ್ಯವೈಖರಿ ಆಧರಿಸಿ ಸಚಿವ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆದಿದೆ. ಮೋದಿ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ವರ್ಷ ಜುಲೈ 7 ರಂದು ಸಂಪುಟ ಪುನಾರಚನೆ ನಡೆದಿತ್ತು. ಆ ವೇಳೆ 12 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಡಲಾಗಿತ್ತು

ಸಂಸತ್ ಚುನಾವಣೆ ಸಮೀಪಿಸುತ್ತಿದೆ. ಇನ್ನು 15 ತಿಂಗಳು ಮಾತ್ರ ಬಾಕಿ ಇದೆ. ಆದರೆ, ಒಂದೆಡೆ ಬಿಜೆಪಿ, ಇನ್ನೊಂದೆಡೆ ಸರ್ಕಾರದಲ್ಲಿ ಬದಲಾವಣೆ ಮಾಡಲು ಮೋದಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮುಂದಿನ ವರ್ಷ ಒಂಬತ್ತು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇತ್ತೀಚೆಗೆ ಅಧಿಕಾರಕ್ಕೆ ಬಂದ ರಾಜ್ಯಗಳಿಗೆ ಆದ್ಯತೆ ನೀಡಬೇಕಾದ ಪರಿಸ್ಥಿತಿ. ಇವೆಲ್ಲವನ್ನೂ ಗಮನಿಸಿದರೆ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದೆಯಂತೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳ ಕೆಲವು ಹೊಸ ಸಂಸದರಿಗೆ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂಬ ಚರ್ಚೆ ಬಿಜೆಪಿಯಲ್ಲಿದೆ.

ಭಾರತೀಯ ಜನತಾ ಪಕ್ಷದಲ್ಲಿಯೂ ಮಹತ್ವದ ಬದಲಾವಣೆಗಳು ಆಗಲಿವೆ ಎಂದು ಪಕ್ಷದ ಮುಖಂಡರು ನಂಬಿದ್ದಾರೆ. ಅದರಲ್ಲೂ ಹಾಲಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅವಧಿ ಜನವರಿ 20ಕ್ಕೆ ಕೊನೆಗೊಳ್ಳಲಿದೆ. ನಡ್ಡಾ ಮತ್ತೊಮ್ಮೆ ಅಧ್ಯಕ್ಷರಾಗಿ ಮುಂದುವರಿದರೂ ಪಕ್ಷದ ಸ್ಥಾನಗಳಲ್ಲಿ ಪ್ರಮುಖ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.  ಸಚಿವ ಸಂಪುಟ ಪುನಾರಚನೆ ಬಜೆಟ್ ಅಧಿವೇಶನಕ್ಕೂ ಮುನ್ನವೇ ಈ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ. ಆ ಬಳಿಕ ಪಕ್ಷದ ಪ್ರಮುಖ ಸ್ಥಾನಗಳಲ್ಲಿ ಬದಲಾವಣೆ, ಸೇರ್ಪಡೆ ನಡೆಯಲಿದ್ದು, ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಎಲ್ಲ ಪ್ರಕ್ರಿಯೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!