ಹೊಸದಿಗಂತ ವರದಿ ಪುತ್ತೂರು:
ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರಿನ ಅಸ್ತ್ರ ಪ್ರಾಯೋಗಿಸಿರುವ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ಮಾಡಿದ್ದಾರೆ.
ಅವರು ಪುತ್ತೂರಿನಲ್ಲಿ ಗುರುವಾರ ಮಾತನಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಕಾರ್ಯ ನಡೆಯುತ್ತಿದೆ. ಸುಳ್ಯ ಹಾಗು ಪುತ್ತೂರು ಭಾಗದ ಕಾರ್ಯಕರ್ತರ ಮೇಲೆ ಗಡಿಪಾರಿನ ಆದೇಶ ಹೊರಡಿಸಲಾಗಿದೆ. ಯಾವುದೇ ಅಪರಾಧವಿಲ್ಲದಿದ್ದರೂ, ಸುಳ್ಳು ಪ್ರಕರಣ ದಾಖಲು ಮಾಡಲಾಗುತ್ತಿದೆ. ಹೀಗಾಗಲು ಬಿಡಬಾರದು. ಒಂದೇ ಒಂದು ಕೇಸ್ ಇಲ್ಲದವರನ್ನು ಗಡಿಪಾರು ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದರು.
ಸಿದ್ಧರಾಮಯ್ಯ ಸರಕಾರದಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಗೋಹತ್ಯೆ, ರೈತರ ಆತ್ಮಹತ್ಯೆ, ಗೂಂಡಾಗಳ ಹಾವಳಿ ಹೆಚ್ಚಾಗಿದೆ ರಾಜ್ಯದಲ್ಲಿ ಗೂಂಡಾಗಳಿಗೆ ಹೆಚ್ಚಿನ ಲಾಭ ಆಗಿದೆ. ರಾಜ್ಯ ಇಂದು ಗೂಂಡಾ ರಾಜ್ಯವಾಗಿ ಬದಲಾಗಿದೆ ಎಂದು ಅವರು ಆರೋಪಿಸಿದರು ಮಾಜಿ ಶಾಸಕ ಸಂಜೀವ ಮತಾಂದೂರು ಮೊದಲಾದವರಿದ್ದರು.