Exit Poll 2024 । ಕೇರಳದಲ್ಲಿ ಈ ಬಾರಿ ಬಿಜೆಪಿ ಮಾಡುತ್ತೆ ಕಮಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ (BJP) ಖಾತೆ ತೆರೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಪೂಲ್‌ ಹಬ್‌ ಸಮೀಕ್ಷೆಯ ಪ್ರಕಾರ ಎನ್‌ಡಿಎ 1-3 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಯುಡಿಎಫ್‌ ಮೈತ್ರಿಕೂಟ 15-18, ಎಲ್‌ಡಿಎಫ್‌ 2-5 ಸ್ಥಾನ ಗೆಲ್ಲಬಹುದು ಹೇಳಿದೆ.

ಟುಡೇಸ್‌ ಚಾಣಕ್ಯ ಸಮೀಕ್ಷೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ 4 ± 3, ಯುಡಿಎಫ್‌ 15 ± 3, ಎಲ್‌ಡಿಎಫ್‌ 1 ± 1 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಂದಾಜಿಸಿದೆ.

ಟೈಮ್ಸ್‌ ನೌ ಸಮೀಕ್ಷೆ ಯುಡಿಎಎಫ್‌ 14-15, ಎಲ್‌ಡಿಎಫ್‌ 04, ಬಿಜೆಪಿ +01 ಸ್ಥಾನ ಗಳಿಸಬಹುದು ಎಂದು ಭವಿಷ್ಯ ನುಡಿದಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 2019 ರ ಚುನಾವಣೆಯಲ್ಲಿ, ಐಎನ್​ಸಿಎ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ, ಎನ್​​ಡಿಎ ಒಂದೂ ಸ್ಥಾನ ಗೆದ್ದಿರಲಿಲ್ಲ. ಇಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಸಿಪಿಐ (ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ನಡುವೆ ನೇರ ಸ್ಪರ್ಧೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!