ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಬಿಜೆಪಿ ನೇತೃತ್ವದ ಎನ್ ಡಿಎ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಎನ್ ಡಿಎ ಸರ್ಕಾರವನ್ನು ಮರು ಆಯ್ಕೆ ಮಾಡಲು ಜನರು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ವಿಶ್ವಾಸದಿಂದ ಹೇಳಬಲ್ಲೆ ಎಂದು ಹೇಳಿದ್ದಾರೆ.
‘ಅವಕಾಶವಾದಿ INDIA ಬಣ ಮೈತ್ರಿ’ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ . ವಿಪಕ್ಷಗಳ ಮೈತ್ರಿಕೂಟವನ್ನು ಜಾತಿವಾದಿ, ಕೋಮುವಾದಿ ಮತ್ತು ಭ್ರಷ್ಟಾಚಾರಿಗಳ ಕೂಟ ಎಂದು ಕರೆದರು.
ಈ ಚುನಾವಣೆ ಪ್ರಚಾರದ ಮೂಲಕ ವಿಪಕ್ಷಗಳ ಮೈತ್ರಿಕೂಟ ಮೋದಿಯನ್ನು ಧಿಕ್ಕರಿಸುವಲ್ಲಿ ತನ್ನ ಪರಿಣತಿಯನ್ನು ಹೆಚ್ಚಿಸಿಕೊಂಡಿದೆ. ಜನರು ಅಂತಹ ಪ್ರತಿಗಾಮಿ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.